ನ್ಯೂಸ್

ರಾಜ್ಯದಲ್ಲಿಂದು ಕರೊನಾದಿಂದ ಗುಣಮುಖರಾದವರು 2397 ಮಂದಿ; 1,12,504ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2397 ಜನರು ಕರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ಇದು ಸಮಾಧಾನಕರ ಸಂಗತಿಯಾದರೂ ಇಂದೂ ಕೂಡ 5503 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದೆ. ಪ್ರತಿದಿನವೂ 5000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 67,448 ಹಾಗೂ ಇಲ್ಲಿಯವರೆಗೆ ಡಿಸ್​ಚಾರ್ಜ್​ ಆದವರ ಸಂಖ್ಯೆ 42,901ಹಾಗೇ ಮೃತಪಟ್ಟವರು 2147 ಮಂದಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವತ್ತು ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ? ಮೃತಪಟ್ಟವರು ಎಷ್ಟು ಮಂದಿ? ಇಲ್ಲಿದೆ ನೋಡಿ ಲಿಸ್ಟ್​...