ನ್ಯೂಸ್

ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸುವ ಮುಂಬೈ ವಿವಿ ಸಹಾಯವಾಣಿ

ಮುಂಬೈ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ ನಿರ್ದೇಶನ ಹಾಗೂ ರಾಜ್ಯ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶನಗಳಿಗೆ ಅನುಗುಣವಾಗಿ ಮುಂಬೈ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಂಗಳವಾರ ಸಹಾಯವಾಣಿ ಮತ್ತು ಇಮೇಲ್ ಸೌಲಭ್ಯವನ್ನು ಕಲ್ಪಿಸಿದೆ.

ಕೋವಿಡ್ - 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಶಿಕ್ಷಣ ಇತ್ಯಾದಿ ಕುರಿತು ಮಾಹಿತಿ ನೀಡಲು ಈ ಸಹಾಯವಾಣಿ ಸೌಲಭ್ಯ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಬೆಳಗ್ಗೆ 11 ರಿಂದ ಸಂಜೆ 5 ರ ವರೆಗೆ +91 96190 34634 ಮತ್ತು +91 93737 00797 ಸಂಖ್ಯೆಗೆ ಕರೆ ಮಾಡಬಹುದು ಅಥವಾ examhelpline@mu.ac.in ಗೆ ಬರೆದು ಮಾಹಿತಿ ಪಡೆಯಬಹುದು. ವಿಶ್ವವಿದ್ಯಾಲಯದ ದೂರ ಮತ್ತು ಮುಕ್ತ ಕಲಿಕೆ (ಐಡಿಒಎಲ್) ವಿದ್ಯಾರ್ಥಿಗಳು info@idol.mu.ac.in ಗೆ ಬರೆದು ಮಾಹಿತಿ ಪಡೆದುಕೊಳ್ಳಬಹುದು.

ಪರೀಕ್ಷೆ ಹಾಗೂ ಪ್ರವೇಶದ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನೆ ಕೇಳಬಹುದು. ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಪ್ರಶ್ನೆಗಳಿಗೆ ಅಥವಾ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ.