ನ್ಯೂಸ್

ಸುಧಾರಿಸದ ಪತ್ನಿ ಆರೋಗ್ಯ, ಮನನೊಂದು ಪತಿ ಆತ್ಮಹತ್ಯೆ

ಮಳವಳ್ಳಿ: ಪಟ್ಟಣದಲ್ಲಿ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಪತ್ನಿಗೆ ಚಿಕಿತ್ಸೆ ಕೊಡಿಸಿದರೂ ಗುಣ ಕಾಣದ್ದರಿಂದ ಮನನೊಂದು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣದ ಎನ್‌ಇಎಸ್ ಬಡಾವಣೆಯ ನಿವಾಸಿ ಪ್ರಮೋದ್ (26) ಮೃತರು. ಕಾರು ಚಾಲಕನಾಗಿ ಜೀವನ ಸಾಗಿಸುತ್ತಿದ ಈತನಿಗೆ ಎರಡು ವರ್ಷಗಳ ಹಿಂದೆ ವಿವಾಹವಾಗಿತ್ತು. ಆದರೆ ಇತ್ತೀಚೆಗೆ ಪತ್ನಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಆಕೆಯ ಆರೋಗ್ಯ ಸುಧಾರಿಸಿರಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕುಟುಂಬದವರು ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸ್ಥಳ ಮಹಜರು ನಡೆಸಿದ ಪೊಲೀಸರು ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.