ಶಿವಮೊಗ್ಗ: ಯೋಗಾಸನದಿಂದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ. ಪ್ರತಿಯೊಬ್ಬರೂ ನಿತ್ಯ ಯೋಗ ಮಾಡಬೇಕೆಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಹೇಳಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಎಂಟು ದಿನಗಳ ಯೋಗ ಅರಿವು ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಯೋಗಭ್ಯಾಸವನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಅಳವಡಿಸಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳು ಇರುವವೆಂದು ಅವರು ತಿಳಿಸಿದರು.
ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ, ಡಾ.ಎಸ್.ಎಂ.ರವೀಂದ್ರ ಗೌಡ ಉಪಸ್ಥಿತರಿದ್ದರು. ವಿವಿಯ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.