ನ್ಯೂಸ್

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸೌಲಭ್ಯ ಇಲ್ಲ

ಪ್ರಸಿನ್ ಕೆ.ಆರ್

ಎಚ್.ಡಿ. ಕೋಟೆ: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳಿಗೆ ಅಪಾರ ಪ್ರಮಾಣದಲ್ಲಿ ಅನುದಾನ ಬರುತ್ತಿದ್ದರೂ ಕೂಡ ಗುಣಮಟ್ಟದ ಆಹಾರ ವಿದ್ಯಾರ್ಥಿಗಳಿಗೆ ಲಭಿಸುತ್ತಿಲ್ಲ ಎಂದು ಪುರಸಭಾ ಸದಸ್ಯ ಮಿಲ್ ನಾಗರಾಜು ಹೇಳಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಆಹಾರವನ್ನು ಪರಿಶೀಲನೆ ನಡೆಸಿದಾಗ ಮಕ್ಕಳಿಗೆ ಸರಿಯಾಗಿ ಬೇಯದಿರುವ ಆಹಾರ ನೀಡುತ್ತಿರುವುದು ಕಂಡುಬಂದಿದೆ. ವಾರ್ಡನ್ ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ವಿದ್ಯಾರ್ಥಿಗಳಲ್ಲಿ ಮೂಲ ಸೌಕರ್ಯದ ಕೊರತೆ ಕಾಣುತ್ತಿದೆ. ಅಲ್ಲದೆ ಭದ್ರತೆಗೆ ಯಾವುದೇ ರೀತಿಯ ಕ್ರಮವಹಿಸಿಲ್ಲ. ಸುಸಜ್ಜಿತ ಕಟ್ಟಡ ವ್ಯವಸ್ಥೆ ಇಲ್ಲ. ಜನಪ್ರತಿನಿಧಿಗಳು ಜಾಣ ಮೌನ ವಹಿಸಿದ್ದಾರೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಕೃಷ್ಣನಾಯಕ, ಚಾಕಳ್ಳಿಕೃಷ್ಣ, ದೇವನಾಯಕ, ಕುಮಾರ್ ಇದ್ದರು.