ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ 2023ರ ವಿಧಾನಸಭಾ ಚುನಾವಣೆ ನಡೆಯಲಿದೆ. ಯಾವುದೇ ಕಾರಣಕ್ಕೂ ಬಿಎಸ್ವೈ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಾಲು ಸಾಲು ಸಮಸ್ಯೆಗಳನ್ನು ಎದುರಿಸಿ ಸಮರ್ಥವಾಗಿ ಅಭಿವೃದ್ಧಿಪರ ಆಡಳಿತ ನೀಡುತ್ತಿರುವ ಯಡಿಯೂರಪ್ಪ ಅವರು ಮುಂದಿನ ಎರಡೂವರೆ ವರ್ಷ ಉತ್ತಮ ಆಡಳಿತ ನೀಡಲಿದ್ದಾರೆ. ಪಕ್ಷದ ಹೈಕಮಾಂಡ್ ಸೇರಿ ಯಾರೂ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಮಾತನಾಡಿಲ್ಲ. ಇದನ್ನೂ ಓದಿ: ಶಾಂಘೈಗೆ 100 ಕಿ.ಮೀ ಗಿಂತಲೂ ಹತ್ತಿರದಲ್ಲಿ ಅಮೆರಿಕ ಯುದ್ಧ ವಿಮಾನ ಹಾರಾಟ; ಅಚ್ಚರಿ ಮೂಡಿಸಿದ ದೊಡ್ಡಣ್ಣನ ನಡೆ
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸಾರಿಗೆ ಇಲಾಖೆ ಅಭಿವೃದ್ಧಿ ಕುರಿತು ರ್ಚಚಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆಯೇ ಹೊರತು ರಾಜಕೀಯ ವಿಷಯ ಚರ್ಚೆ ಮಾಡಲು ಅಲ್ಲ ಎಂದು ಸ್ಪಷ್ಟಪಡಿಸಿದರು.