ಶಿವಮೊಗ್ಗ ಜಿಪಂನಲ್ಲಿ ಬಿ.ಬಿ.ಕಾವೇರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಗುರುದತ್ತ ಹೆಗಡೆ, ಎನ್.ಹೇಮಂತ್, ರಾಜೇಂದ್ರ ಬಾಬು ಇದ್ದರು.  
ನ್ಯೂಸ್

ಬಾಳೆಹಣ್ಣು ಕೊಟ್ರೆ ಸಾಕೆಂಬ ಏಕಪಕ್ಷೀಯ ನಿರ್ಧಾರ ಬೇಡ

ಶಿವಮೊಗ್ಗ: ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಎಚ್ಚರವಹಿಸಿ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಪ್ರಯತ್ನ ನಡೆಸಿ. ಶಾಲೆಯಲ್ಲಿ ಶಿಕ್ಷಕರು ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗು ಶಾಲೆ ತೊರೆಯುವಂತೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ವಿ.ಕಾವೇರಿ ಅವರು ಡಿಡಿಪಿಐ ಮಂಜುನಾಥ ಸ್ವಾಮಿ ಅವರಿಗೆ ಸೂಚಿಸಿದರು.

ಬುಧವಾರ ಕೆಡಿಪಿ ಸಭೆ ನಡೆಸಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಾರದ ಐದು ದಿನವೂ ಮೊಟ್ಟೆ ವಿತರಿಸಬೇಕು. ಮೊಟ್ಟೆ ಬದಲು ಬಾಳೆಹಣ್ಣು ನೀಡಿದರೆ ಸಾಕು ಎಂದು ಮುಖ್ಯ ಶಿಕ್ಷಕರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವುದು ಬೇಡ ಎಂದು ತಿಳಿಸಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕೆ ಅಜೀಂ ಪ್ರೇಮ್‌ಜೀ ಫೌಂಡೇಷನ್‌ನಿಂದ ಶಿಕ್ಷಣ ಇಲಾಖೆಗೆ 1,500 ಕೋಟಿ ರೂ. ನೀಡಲಾಗಿದೆ. ದೇಶದಲ್ಲಿ ಸ್ವಯಂಸೇವಾ ಸಂಸ್ಥೆಯೊಂದು ಇಷ್ಟು ದೊಡ್ಡ ಮೊತ್ತವನ್ನು ಮಕ್ಕಳಿಗೆ ನೀಡಿರುವುದು ಇದೇ ಮೊದಲು ಎಂದು ಹೇಳಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಜೇಂದ್ರ ಬಾಬು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.