ನ್ಯೂಸ್

ಶಾಲೆಗಳನ್ನು ತೆರೆಯಲು ತರಾತುರಿ ಇಲ್ಲ: ಸುರೇಶ್‌ಕುಮಾರ್

lakshmihegde

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯಲು ಸರ್ಕಾರ ತರಾತುರಿ, ಅವಸರ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳ ಆರಂಭಕ್ಕೆ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಗೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದಾರೆ.
‘‘ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ ನೀಡಬಯಸುತ್ತೇನೆ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ’’ ಎಂದೂ ಅವರು ಹೇಳಿದ್ದಾರೆ.

‘‘ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿಯು ಅಧಿಕೃತವಾಗಿ ಸರ್ಕಾರ ಘೋಷಿಸಿರುವ ಮಾಹಿತಿಯಲ್ಲ. ಶಾಲೆ ತೆರೆಯುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ’’ ಎಂದು ತಿಳಿಸಿದ್ದಾರೆ.