ನ್ಯೂಸ್

ಇದಕ್ಕಿಂತ ನಾಚಿಕೆಗೇಡಿನ ವಿಷಯ ಮತ್ತೊಂದಿಲ್ಲ.. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮಾಜಿ ಸಿಎಂ ಅಖಿಲೇಶ್​ ಯಾದವ್​ ಕಿಡಿ! | ​Bike

Bike : ಉತ್ತರ ಪ್ರದೇಶದ ಕೌಸಂಬಿ ಜಿಲ್ಲೆಯಲ್ಲಿ ಶವ ವಾಹನ ಸಿಗದ ಕಾರಣ ಮಹಿಳೆಯೊಬ್ಬಳ ಶವವನ್ನು ಮೋಟಾರ್ ಸೈಕಲ್‌ನಲ್ಲಿ ಶವಾಗಾರಕ್ಕೆ ಸಾಗಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಘಟನೆ ಕುರಿತು ಅಖಿಲೇಶ್ ಯಾದವ್ ಪ್ರತಿಕ್ರಿಯೆ

ಮೃತ ದೇಹವನ್ನು ಬೈಕ್​ನಲ್ಲಿ ಕೊಂಡೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆಯೇ,ಅದಕ್ಕೆ ಪ್ರತಿಕ್ರಿಯಿಸಿದ  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. "ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ. ಮುಖ್ಯಮಂತ್ರಿ ಅಥವಾ ಆರೋಗ್ಯ ಸಚಿವರಿಗೆ ಹೇಳಲು ಇನ್ನೇನೂ ಇಲ್ಲ" ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೃತಳನ್ನು ಬುದ್ಧರಾಣಿ ಎಂದು ಗುರುತಿಸಲಾಗಿದೆ. ಕೌಸಂಬಿ ಜಿಲ್ಲೆಯ ಮೊಹಬ್ಬತ್‌ಪುರ ಜೀತಾ ಗ್ರಾಮದ ನಿವಾಸಿಯಾಗಿದ್ದು, ಈಕೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಇನ್ನು ಸಾವಿಗೆ ಕಾರಣ ಏನು ಎಂಬುದು ತಿಳಿದಿಲ್ಲ ಎಂದು ಸುದ್ದಿಮೂಲಗಳು ವರದಿ ಮಾಡಿದೆ.

ಈ ಸಾವಿನ ಬಗ್ಗೆ ಸಂಬಂಧಿಕರು ಪ್ರತಿಕ್ರಿಯಿಸಿದ್ದು, ಬುದ್ಧರಾಣಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ಹಾಗೆಯೇ ಆಕೆಯ ದೇಹವನ್ನು ಮರಣೋತ್ತರ ಪರಕ್ಷೆಗೆ ಒಳಪಡಿಸಿ, ನಂತರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ ಆಕೆಯ ಗಂಡ ಮತ್ತು ಮಗ ಉತ್ತರ ಪ್ರದೇಶದ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಶವ ವಾಹನ ಸೌಲಭ್ಯವಿಲ್ಲದೆ ಇರುವುದರಿಂದ ಬೈಕ್​ನಲ್ಲಿ ಮೃತದೇಹವನ್ನು ಸಾಗಿಸಿವುದರ ಬಗ್ಗೆ ತಿಳಿಸಿದ್ದಾರೆ.

ಈ ವಿಡಿಯೋ ವೈರಲ್​ ಆದ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮಧುಸೂದನ್ ಹುಲ್ಗಿ ಅವರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ. (ಏಜೆನ್ಸೀಸ್​)