ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರಿನಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ಕಟ್ಟಲು ಯಾರಾದ್ರೂ ಪ್ಲ್ಯಾನ್ ಮಾಡಿದ್ದರೆ ಅದನ್ನು ಕೂಡಲೇ ನಿಲ್ಲಿಸಿಬಿಡಿ. ಅಪ್ಪಿತಪ್ಪಿ ನೀವೇನಾದ್ರೂ ಸಂಘ ಕಟ್ಟಿದ್ರೆ ಕಾನೂನು ಕ್ರಮ ಎದುರಿಸಬೇಕಾದೀತು ಜೋಕೆ!
ಹೌದು, ಈ ಬಗ್ಗೆ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದು, 'ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ' ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿರಿ ಪಡುಬಿದ್ರಿ ಕಡಲ್ಕೊರೆತ, ಪ್ರಾಣಾಪಾಯದಿಂದ ಸಚಿವ ಪಾರು !
'ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು' ಎಂದು ಡಿಕೆಶಿ ಮನವಿ ಮಾಡಿದ್ದಾರೆ.
ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.