ಆಂಧ್ರಪ್ರದೇಶ: ಟಾಲಿವುಡ್ನ ಪವರ್ ಸ್ಟಾರ್, ನಟ ಪವನ್ ಕಲ್ಯಾಣ್ ಮತ್ತು ಸ್ಯಾಂಡಲ್ವುಡ್ನ ನಟಿ ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ ಹೆಸರಾಂತ ನಟರೊಬ್ಬರು ವಿಲನ್ ಆಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಹರೀಶ್ ಶಂಕರ್ ನಿರ್ದೇಶನದ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಕುರಿತು ಪವನ್ ಕಲ್ಯಾಣ್ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದು, ಚಿತ್ರದಲ್ಲಿ ವಿಲನ್ ಪಾತ್ರವನ್ನು ತಮಿಳು ನಟ, ನಿರ್ದೇಶಕ ಪಾರ್ಥಿಬನ್ ನಿರ್ವಹಿಸಲಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಕೇಳಿಬಂದಿದೆ. ಈ ಕುರಿತು ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳುವವರೆಗೂ ಕಾಯಬೇಕಿದೆ.
ಸದ್ಯದ ವರದಿ ಪ್ರಕಾರ, ಸಿನಿಮಾದ ಮಧ್ಯಂತರ ಭಾಗದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಸಿನಿಮಾದಲ್ಲಿ ಸಾಕ್ಷಿ ವೈದ್ಯ, ಪೂಜಾ ಹೆಗ್ಡೆ, ಆಶುತೋಶ್ ರಾಣಾ, ಗೌತಮಿ, ಬಿ.ಎಸ್. ಅವಿನಾಶ್ ಮುಂತಾದವರ ತಾರಾಗಣವಿದೆ,(ಏಜೆನ್ಸೀಸ್).