ನ್ಯೂಸ್

ಈ ಮೂರು ರಾಶಿಯವರು ಹಣ, ಯಶಸ್ಸಿಗಿಂತ ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತಾರಂತೆ! Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಏಕೆಂದರೆ, ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ದಿನಾಂಕ, ರಾಶಿ, ನಕ್ಷತ್ರ ಹಾಗೂ ಗ್ರಹಗಳ ಸ್ಥಾನ ಭವಿಷ್ಯದ ಜೀವನವನ್ನು ನಿರ್ಧರಿಸುತ್ತದೆ. ಅಲ್ಲದೆ, ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.

ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.

ಅಂದಹಾಗೆ, ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು ಹಣ ಮತ್ತು ಯಶಸ್ಸನ್ನು ಬೆನ್ನಟ್ಟುವುದಕ್ಕಿಂತ ಸಂಬಂಧಗಳು ಮತ್ತು ಭಾವನೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರಂತೆ. ಆ ರಾಶಿಚಕ್ರ ಚಿಹ್ನೆಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ವೃಷಭ ರಾಶಿ

ವೃಷಭ ರಾಶಿಯಲ್ಲಿ ಜನಿಸಿದ ಜನರು ಶಾಂತ ಸ್ವಭಾವದವರು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರು ಹಣ ಮತ್ತು ಯಶಸ್ಸನ್ನು ಬಯಸಿದರೂ, ತಮ್ಮ ಸ್ವಯಂ ಶಿಸ್ತು ಮತ್ತು ಕರ್ತವ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಅವರಿಗೆ ಕಠಿಣ ಪರಿಶ್ರಮದಲ್ಲಿ ಹೆಚ್ಚಿನ ನಂಬಿಕೆ ಇರುತ್ತದೆ. ಅವರ ಈ ಗುಣವೇ ಅವರ ಕಡೆಗೆ ಹಣವನ್ನು ಆಕರ್ಷಿಸುತ್ತದೆ. ಹೀಗಾಗಿ ಅವರು ಹಣದ ಹಿಂದೆ ಓಡಬೇಕಾಗಿಲ್ಲ.

ಸಿಂಹ ರಾಶಿ

ಸಿಂಹ ರಾಶಿಯಲ್ಲಿ ಜನಿಸಿದ ಜನರು ತಮ್ಮ ನಾಯಕತ್ವದ ಗುಣಗಳಿಗೆ ಹೆಸರುವಾಸಿಯಾಗಿರುತ್ತಾರೆ. ಅವರ ಜವಾಬ್ದಾರಿ ಮತ್ತು ಕರ್ತವ್ಯ ಪ್ರಜ್ಞೆ ಅಸಾಧಾರಣವಾಗಿರುತ್ತದೆ. ಅವರು ಹಣಕ್ಕಿಂತ ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸ್ವಭಾವವನ್ನು ಹೊಂದಿರುತ್ತಾರೆ. ಅವರು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಅವರೆಂದಿಗೂ ಅಗತ್ಯಕ್ಕಿಂತ ಹೆಚ್ಚು ಗಳಿಸಲು ಆಸಕ್ತಿ ಹೊಂದಿರುವುದಿಲ್ಲ.

ತುಲಾ ರಾಶಿ

ತುಲಾ ರಾಶಿಯಲ್ಲಿ ಜನಿಸಿದ ಜನರು ತುಂಬಾ ಸ್ನೇಹಪರರು ಮತ್ತು ವಿಶ್ವಾಸಾರ್ಹರು. ಅವರೊಂದಿಗೆ ಇರುವುದು ಇತರರಿಗೆ ಭದ್ರತೆಯ ಭಾವನೆಯನ್ನು ನೀಡುತ್ತದೆ. ಅವರಿಗೆ ಹೆಚ್ಚು ಹಣ ಗಳಿಸುವುದಕ್ಕಿಂತ ಉತ್ತಮ ಸಂಬಂಧಗಳನ್ನು ಗಳಿಸುವುದರಲ್ಲಿ ಹೆಚ್ಚು ಆಸಕ್ತಿ ಇರುತ್ತದೆ. ಅವರು ಜೀವನದಲ್ಲಿ ಸರಿಯಾದ ಜನರನ್ನು ತಿಳಿದಿರುವ ಕಾರಣ ಅವರು ಯಶಸ್ಸಿನ ಬೆನ್ನಟ್ಟುವ ಅಗತ್ಯವಿಲ್ಲ. ಯಶಸ್ಸು ಅವರನ್ನು ಹುಡುಕಿಕೊಂಡು ಬರುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.