ನ್ಯೂಸ್

ಈ ಮೂರು ರಾಶಿಯವರು ಸ್ನೇಹಕ್ಕಾಗಿ ಏನು ಬೇಕಾದರೂ ಮಾಡುತ್ತಾರಂತೆ! ನಿಮ್ಮ ರಾಶಿಯೂ ಇದೇನಾ? Zodiac Signs

Zodiac Signs : ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ ಎಂಬುದು ಅವನ ಭವಿಷ್ಯದ ಜೀವನ, ವ್ಯಕ್ತಿತ್ವದ ಗುಣ ಲಕ್ಷಣಗಳು, ಆರ್ಥಿಕ ಪರಿಸ್ಥಿತಿ ಮತ್ತು ಆತನ ಸಕಾರಾತ್ಮಕ ಹಾಗೂ ನಕಾರಾತ್ಮಕ ಗುಣಗಳ ಮೇಲೆ ಪ್ರಮುಖ ಪ್ರಭಾವ ಬೀರುತ್ತದೆ ಎಂದು ಅನಾದಿ ಕಾಲದಿಂದಲೂ ನಂಬಲಾಗಿದೆ. ಈ ಕಾರಣಕ್ಕೆ ಹುಟ್ಟಿದ ತಕ್ಷಣ ಸಮಯವನ್ನು ನೋಡಲಾಗುತ್ತದೆ.

ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.

ಅಂದಹಾಗೆ, ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿ ಸ್ನೇಹಕ್ಕೆ ಹೆಚ್ಚು ಬದ್ಧರಾಗಿರುತ್ತಾರೆ ಮತ್ತು ಸ್ನೇಹಕ್ಕಾಗಿ ಏನು ಬೇಕಾದರೂ ಮಾಡುವ ಗುಣವನ್ನು ಹೊಂದಿರುತ್ತಾರಂತೆ. ಹಾಗಾದರೆ, ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಮೇಷ ರಾಶಿ

ಮೇಷ ರಾಶಿಯಲ್ಲಿ ಜನಿಸಿದ ಜನರು ಸಾಹಸಮಯರು ಮತ್ತು ಎಲ್ಲಾ ಸಂಬಂಧಗಳಿಗಿಂತ ಸ್ನೇಹವನ್ನು ಗೌರವಿಸುತ್ತಾರೆ. ಅವರು ಎಲ್ಲರೊಂದಿಗೂ ಸ್ನೇಹಪರರಾಗಿರುತ್ತಾರೆ ಮತ್ತು ಯಾರೊಂದಿಗಾದರೂ ಸ್ನೇಹ ಬೆಳೆಸಲು ಯಾವುದೇ ಹಂತಕ್ಕೆ ಹೋಗಲು ಸಿದ್ಧರಿರುತ್ತಾರೆ. ಅವರು ತಮ್ಮ ಸ್ನೇಹಿತರನ್ನು ಯಾರಿಗೂ ಬಿಟ್ಟುಕೊಡುವುದಿಲ್ಲ. ಹೊಸ ಸ್ನೇಹಿತರನ್ನು ಮಾಡಿಕೊಳ್ಳುವ ಸಂದರ್ಭಗಳಲ್ಲಿ ಅವರು ಸಂತೋಷವಾಗಿರುತ್ತಾರೆ.

ಮಿಥುನ ರಾಶಿ

ಮಿಥುನ ರಾಶಿಚಕ್ರದ ಅಡಿಯಲ್ಲಿ ಜನಿಸಿದ ಜನರು ಸ್ವಭಾವತಃ ದ್ವಂದ್ವ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿರುತ್ತಾರೆ. ಅವರು ತಮ್ಮ ವೈಯಕ್ತಿಕ ವಿಷಯಗಳನ್ನು ಯಾರೊಂದಿಗೂ ಸುಲಭವಾಗಿ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ಇವರು ತಮ್ಮ ಮೇಲೆ ನಂಬಿಕೆ ಇಟ್ಟವರಿಗೆ ತುಂಬಾ ನಿಷ್ಠಾವಂತ ಮತ್ತು ನಿಜವಾದ ಸ್ನೇಹಿತರು. ಇವರೊಂದಿಗೆ ಸ್ನೇಹ ಬೆಳೆಸುವವರು ತುಂಬಾ ಅದೃಷ್ಟವಂತರು. ಏಕೆಂದರೆ, ಇವರು ಸ್ನೇಹಿತರಿಗೆ ಸಮಸ್ಯೆಯಾದರೆ, ಖಂಡಿತವಾಗಿಯೂ ತಮ್ಮ ಪ್ರಾಣವನ್ನೇ ಕೊಡಲು ಹಿಂಜರಿಯುವುದಿಲ್ಲ.

ತುಲಾ ರಾಶಿ

ತುಲಾ ರಾಶಿಯಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿ ಸಮತೋಲನ ಮತ್ತು ಶಾಂತಿಯುತವಾಗಿರುತ್ತಾರೆ. ಅವರು ಪ್ರತಿಯೊಬ್ಬರ ಜೀವನದಲ್ಲೂ ಶಾಂತಿ ಮತ್ತು ಸಮತೋಲನವನ್ನು ಸೃಷ್ಟಿಸಲು ದೃಢನಿಶ್ಚಯ ಹೊಂದಿರುತ್ತಾರೆ. ಇವರು ತಮ್ಮ ಸಂಬಂಧಗಳಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಬಹಳ ಕಾಳಜಿ ವಹಿಸುತ್ತಾರೆ ಮತ್ತು ಇತರರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸುವ ಉದಾತ್ತ ಸ್ವಭಾವವನ್ನು ಹೊಂದಿರುತ್ತಾರೆ. ಇವರು ವಿಶೇಷವಾಗಿ ಉತ್ತಮ ಸ್ನೇಹಿತರ ಉತ್ತಮ ಉದಾಹರಣೆಗಳಾಗಿರುತ್ತಾರೆ. ಸ್ನೇಹಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಿರುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.