ನ್ಯೂಸ್

'ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ..gaddappa

ಮಂಡ್ಯ :  ತಿಥಿ ಸಿನಿಮಾ ಮೂಲಕ ಗಡ್ಡಪ್ಪ ( gaddappa) ಎಂದೇ ಹೆಸರುವಾಸಿಯಾದ ಮಂಡ್ಯದ ಚನ್ನೇಗೌಡ (89)  ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದಲ್ಲಿ ನಿಧನ ಹೊಂದಿದ್ದಾರೆ.

ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.

ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ. ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು.

ಗಡ್ಡಪ್ಪ ಎಂದು ಖ್ಯಾತಿ ಪಡೆದಿರುವ ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಮೂಲ ಹೆಸರು ಚನ್ನೇಗೌಡ ಆದ್ರೂ ಗಡ್ಡಪ್ಪ ಅಂತಾಲೇ ಕರೆಸಿಕೊಳ್ಳುತ್ತಿದ್ದರು.ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

2016ರಲ್ಲಿ ರಾಮ್ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ತಿಥಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಮಂಡ್ಯದ ಸಾಮಾನ್ಯ ವ್ಯಕ್ತಿ ಚನ್ನೇಗೌಡರು ಬಳಿಕ ಗಡ್ಡಪ್ಪ ಎಂದೇ ಪ್ರಸಿದ್ಧರಾದರು. ಮೇಕಪ್ ಇಲ್ಲದೇ, ಸಾಮಾನ್ಯವಾಗಿ ನಟಿಸಿದ್ದ ಅವರ ನಟನೆ ಜನರಿಗೆ ಬಹಳ ಇಷ್ಟವಾಗಿತ್ತು.  ಈ ಸಿನಿಮಾಗೆ  ಅಂತರರಾಷ್ಟ್ರೀಯ ಪ್ರಶಸ್ತಿ ಕೂಡಾ ಬಂದಿತ್ತು.