ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೆಪ್ಟಂಬರ್ 10 ರಿಂದ 12 ರವರೆಗೆ “ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಲ್ಲಿ ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮ ನೀರಾವರಿ ಅಳವಡಿಕೆ, ರೋಗ ಕೀಟ ನಿರ್ವಹಣೆ ಹಾಗೂ ಮೌಲ್ಯವರ್ಧನೆ” ಎಂಬ ವಿಷಯದ ಬಗ್ಗೆ ರೈತ/ ರೈತಮಹಿಳೆಯರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತ/ ರೈತಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತ ರೈತ/ ರೈತಮಹಿಳೆಯರು ತಮ್ಮ ಹೆಸರನ್ನು ತರಬೇತಿ ಕೇಂದ್ರದ ಕೃಷಿ ಅಧಿಕಾರಿ ದೂ. ಸಂ: 8277933116 ಗೆ ಕರೆಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ರೈತರು ತರಬೇತಿಗೆ ಬರುವಾಗ FID ನಂಬರ್, ರೇಷನ್‌ಕಾರ್ಡ್, ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಗಳನ್ನು ತಪ್ಪದೇ ತರುವುದು. ಮೈಸೂರು ಜಿಲ್ಲೆಯ 45 ರೈತ/ ರೈತಮಹಿಳೆಯರಿಗೆ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.