ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಭಾನುವಾರ ಗ್ಯಾಸ್ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡ ಸ್ಥಳಕ್ಕೆ ಎಸ್‌ಐ ಗಿರೀಶ್ ಭೇಟಿ ನೀಡಿ ಪರಿಶೀಲಿಸಿದರು. 
ನ್ಯೂಸ್

ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಾಯ

ಎಂ.ರವಿ

ಅರಕಲಗೂಡು: ತಾಲೂಕಿನ ಕೊಣನೂರಿನಲ್ಲಿ ಭಾನುವಾರ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ.

ಗ್ರಾಮದ ರಾಧಮ್ಮ, ಮಂಗಳಾ, ಮೀನಾಕ್ಷಿ ಗಾಯಗೊಂಡವರು. ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದೆ. ಮೂವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸಿಡಿದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಅಪಾರ ಹಾನಿ ಸಂಭವಿಸಿದೆ. ಕೊಣನೂರು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.