ನ್ಯೂಸ್

400 KV ಕರೆಂಟ್​ ಕಂಬ ಕುಸಿತ, ಮೂವರು ಸಾವು, ಆರು ಮಂದಿಗೆ ಗಂಭೀರ ಗಾಯ

ಭೋಪಾಲ್​: 400 ಕೆವಿ (400 KV) ಟ್ರಾನ್ಸ್‌ಮಿಷನ್ ಲೈನ್ ಕಂಬ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ನಡೆದಿದೆ.

400 ಕೆವಿ (400 KV) ಮಾರ್ಗದಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಸಿಧಿ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ, ಕೂಲಿ ಕಾರ್ಮಿಕರು ಹಳೆಯ ಟವರ್​ಗಳನ್ನು ಚೇಂಜ್​ ಮಾಡುತ್ತಿದ್ದಾಗ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರೇವಾದಲ್ಲಿರುವ ಸಂಜಯ್​ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.