ಕಾರವಾರ: ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದ ಮೂವರು ಜಲಸಮಾಧಿಯಾದ ಘಟನೆ ಗುರುವಾರ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಸುಮಾ ಸಿದ್ದರಾಜು(21), ತಿಪ್ಪೇಶ ನಾಯಕ್ (20) ಮತ್ತು ರವಿ(35) ಮೃತ ದುರ್ದೈಗಳು. 16 ಜನರ ತಂಡ ಗೋಕರ್ಣ ಪ್ರವಾಸಕ್ಕೆ ಬಂದಿತ್ತು. ಈ ವೇಳೆ ಐವರು ಬೀಚ್ನಲ್ಲಿ ಆಟವಾಡುತ್ತಿದ್ದರು. ಆಗ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಲಾಗಿದೆ. ಇದನ್ನೂ ಓದಿರಿ ಪ್ಲೀಸ್ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರವಾಸದ ಖುಷಿಯಲ್ಲಿದ್ದವರಿಗೆ ನೀರಿನ ರೂಪದಲ್ಲಿ ಬಂದ ಜವರಾಯ, ಶೋಕಸಾಗರದಲ್ಲಿ ಮುಳುಗಿಸಿದ್ದಾನೆ. ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.