ನ್ಯೂಸ್

ಟಿಕೆಟ್​ ದರ ಹೆಚ್ಚಳ; ಮಹಿಳೆಯರಿಗೆ ಉಚಿತ ಪುರುಷರಿಗೆ ಹೊರೆ ಖಚಿತ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ | Ticket price hike

ಬೆಂಗಳೂರು: ಶೆ.15ರಷ್ಟು ಟಿಕೆಟ್​ ದರ ಹೆಚ್ಚಳ(Ticket price hike) ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ ಅವರು, '' ಸಿಎಂ ಸಿದ್ದರಾಯ್ಯನವರೇ ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆ ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಾ?, ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ. "ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ" ಎಂದು ಶೇ. 15 ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದೆ ಎಂದು ಕಿಡಿಕಾರಿದ್ದಾರೆ.

ಶಕ್ತಿ ಯೋಜನೆ ಹೇಗಿದೆ ಎಂದರೆ 'ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆ ಮಳಿಗೆಗಳಲ್ಲಿ ಖರೀದಿ-1 ಪಡೆಯಿರಿ-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದೆ. ಶೇ.15ರಷ್ಟು ಸಾರಿಗೆ ದರ ಕಾಂಗ್ರೆಸ್ ಸರ್ಕಾರದ ನಿರ್ಧಾರ ಮತ್ತು ಜನವಿರೋಧಿ ಇದನ್ನು ವಿರೋಧಿಸಿ ರಾಜ್ಯ ಬೆಜೆಪಿಯು ಜನರ ಪರ ದನಿ ಎತ್ತಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.