Lucknow: ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಾನ್ಸ್ಟೇಬಲ್ ಪತ್ನಿ ಸೌಮ್ಯ ಕಶ್ಯಪ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಲಖನೌದಲ್ಲಿ ನಡೆದಿದೆ.
ಇದನ್ನೂ ಓದಿ: https://www.vijayavani.net/kolhapuri-chappals-get-digital-makeover-with-qr-codes
ಸೌಮ್ಯ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ತನ್ನ ಅತ್ತೆ ಮಾವನ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕ್ಲಿಪ್ನಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಪತಿ ಅನುರಾಗ್ ಸಿಂಗ್, ಬಕ್ಸಿಯ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರನ್ನು ಮರು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ನನ್ನ ಮಾವ ನನ್ನನ್ನು ಕೊಲ್ಲಲು ಬಂದಿದ್ದರು ಎಂದು ಆರೋಪಿಸಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ಸೌಮ್ಯ ಅವರ ಕುಟುಂಬ ಮಣಿಪುರದಲ್ಲಿರುವ ಆಕೆಯ ಮನೆಯತ್ತ ಬಂದಿದ್ದಾರೆ. ಕುಟುಂಬದಿಂದ ದೂರು ದಾಖಲಾದ ನಂತರ ಕೇಸು ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮುಂಬೈನಲ್ಲಿ ನಡೆದ ಪ್ರತ್ಯೇಕ ಪ್ರಕರಣವೊಂದರಲ್ಲಿ 44 ವರ್ಷದ ರೇಣು ಕತ್ರೆ ಕಂಡಿವಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಎನ್ಐ ಭಾನುವಾರ ವರದಿ ಮಾಡಿದೆ. ಪೊಲೀಸರ ಪ್ರಕಾರ ರೇಣು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಟುಂಬಿಕ ಕಲಹಗಳಿಂದ ಬೇಸತ್ತು ಶನಿವಾರ ಜಗಳ ನಡೆದಿದ್ದು, ಇದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ರೇಣುರವರ ಸಹೋದರ ವಕೀಲನಾಗಿದ್ದು, ನನ್ನ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ. ಇನ್ನು ಈ ಮಾಹಿತಿಯ ಪ್ರಕಾರ ಮುಂಬೈ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಸೆಕ್ಸನ್ 108 (ಆತ್ಮಹತ್ಯೆಗೆ ಪ್ರಚೋದನೆ) ಕಾಯ್ದೆ ಅಡಿ ಕೇಸು ದಾಖಲಿಸಿ, ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. (ಏಜೆಸ್ಸೀಸ್)