ವಿಜಯನಗರ: ಗಂಡನಿಂದ ಮಾನಸಿಕ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ. 33 ವರ್ಷದ ರೂಪ(ಬಸಮ್ಮ) ಡೆತ್ನೋಟ್ ಬರೆದಿಟ್ಟು ಆತ್ಮಹತ್ಯಗೆ ಶರಣಾಗಿರುವ ಮಹಿಳೆ.
ನಾನು, ನನ್ನ ಗಂಡನನ್ನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೆ. ಪರಿಪರಿಯಾಗಿ ಕೇಳಿಕೊಂಡರೂ, ನನ್ನ ಜೊತೆಗೆ ಜೀವನ ನಡೆಸುತ್ತಿಲ್ಲ. ಆತ್ಮಹತ್ಯೆ ಮಹಾಪಾಪ ಎಂಬುದು ಗೊತ್ತಿದೆ. ಆದರೂ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಡೆತ್ನೋಟ್ ಬರೆದಿಟ್ಟು ರೂಪ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದೀಗ ಮೃತಳ ತಾಯಿ ನೀಡಿದ ದೂರಿನಂತೆ ಪತಿ ಅರ್ಜುನ್ ಪರಶೆಟ್ಟಿ ಮತ್ತು ಅವರ ಕುಟುಂಬಸ್ಥರ ಮೇಲೆ ಹೂವಿನ ಹಡಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.