ನ್ಯೂಸ್

ಫಿಕ್ಸ್​ ಆಯ್ತು 'ಜೈಲರ್' ಚಿತ್ರದ ಟ್ರೇಲರ್ ರಿಲೀಸ್​ ಸಮಯ!

ಮೋಹನ್​ ಶೆಟ್ಟಿ

ತಮಿಳುನಾಡು: ಸೂಪರ್‌ಸ್ಟಾರ್, ತಲೈವಾ ರಜನಿಕಾಂತ್ ಅವರ ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದ 'ಜೈಲರ್'​ ಚಿತ್ರದ ಟ್ರೇಲರ್​ ಸಮಯವನ್ನು ಇದೀಗ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ಇಂದು (ಜುಲೈ 2) ಸಂಜೆ 6 ಗಂಟೆಗೆ ಸಿನಿಮಾದ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ ಸಜ್ಜಾಗಿದೆ. ಈಗಾಗಲೇ ಬಿಡುಗಡೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಈ ಕುರಿತು ರಜನಿಕಾಂತ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿರುವ 'ಜೈಲರ್' ಸಿನಿಮಾದ ಮೇಲೆ ಭಾರೀ ನಿರೀಕ್ಷೆಗಳು ಮೂಡಿದ್ದು, ಚಿತ್ರದ ಟ್ರೇಲರ್​ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಜೈಲರ್ ಆಗಸ್ಟ್ 10, 2023 ರಂದು ವಿಶ್ವದಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್, ಮೋಹನ್ ಲಾಲ್, ಜಾಕಿ ಶ್ರಾಫ್, ಶಿವರಾಜಕುಮಾರ್, ಸುನಿಲ್ ಮತ್ತು ಯೋಗಿ ಬಾಬು ಸೇರಿದಂತೆ ಪ್ರತಿಭಾವಂತ ಕಲಾವಿದರ ತಾರಗಣವೇ ಇದೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ,(ಏಜೆನ್ಸೀಸ್).