ನ್ಯೂಸ್

ಇಳಿಕೆಯತ್ತ ಸಾಗುತ್ತಿದ್ದ ಚಿನ್ನ ಇಂದು ದಿಢೀರ್ ಏರಿಕೆ! ಎಷ್ಟು ಹೆಚ್ಚಳ? ಹೀಗಿದೆ ಇಂದಿನ ದರ ಪಟ್ಟಿ | Gold Rates ​

Gold Rates: ಕಳೆದ ಎರಡು ವಾರಗಳಿಂದ ಕ್ರಮೇಣವಾಗಿ ಇಳಿಕೆಯತ್ತ ಮುಖಮಾಡಿದ್ದ ಚಿನ್ನ ಇಂದು ದಿಢೀರ್ ಏರಿಕೆ ಕಂಡಿರುವುದು ಸದ್ಯ ಗ್ರಾಹಕರನ್ನು ಅಚ್ಚರಿಗೆ ದೂಡಿದೆ. ಇಂದು ಒಂದೇ ದಿನ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರವಾಗಿ ಹೆಚ್ಚಳವಾಗಿವೆ. ಮದುವೆ ಸೀಸನ್​ನ ತರಾತುರಿಯಲ್ಲಿದ್ದ 'ಚಿನ್ನ'ದಂತ ಗ್ರಾಹಕರು, ಇದೀಗ ಮತ್ತೇ ತಲೆಮೇಲೆ ಕೈಹೊತ್ತು ಕೂರುವಂತಾಗಿದೆ.

ಶನಿವಾರ (ಆ.23) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ 1,090 ರೂ. ಏರಿಕೆಯಾಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 1,000 ರೂ. ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿದೆ. ಒಂದು ಔನ್ಸ್ ಚಿನ್ನದ ಬೆಲೆ 35 ಡಾಲರ್ ಏರಿಕೆಯಾಗಿದೆ. ಇದರೊಂದಿಗೆ, ಒಂದು ಔನ್ಸ್ ಬೆಲೆ 3,373 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಭಾರತದಲ್ಲಿ ಬೆಳ್ಳಿಯ ಬೆಲೆಯೂ ತೀವ್ರವಾಗಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ 2,000 ರೂ. ಜಾಸ್ತಿಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 93,300 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,01,770 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 93,150 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,01,620 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 93,150 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,01,620 ರೂ. ಆಗಿದೆ.

ಬೆಳ್ಳಿ ಬೆಲೆ 2,000 ರೂ. ಏರಿಕೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,20,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,30,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,30,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.