ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 7,542 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಇದುವರೆಗೆ ಪತ್ತೆ ಆಗಿರುವ ಸೋಂಕಿತರ ಪ್ರಮಾಣ 7,51,390ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರಾಗಿರುವವರ ಪೈಕಿ 8,580 ಮಂದಿ ಒಂದೇ ದಿನ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಪ್ರಮಾಣ 6,28,588ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 1,12,427 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 946 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದೇ ದಿನ 73 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 10,356ಕ್ಕೆ ತಲುಪಿದೆ.