ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಯೋಗ ಸಂಸ್ಥೆ ರಾಷ್ಟ್ರೆೊತ್ಥಾನ ಪರಿಷತ್ ಭಾನುವಾರ (ಜೂ.21) ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುತ್ತಿದೆ. ವಿಜಯವಾಣಿ ಹಾಗೂ ದಿಗ್ವಿಜಯ 247 ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿರá-ವ
ಈ ಯೋಗ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಪಾಲ್ಗೊಳ್ಳಬಹುದು. ರಾಷ್ಟ್ರೆೊತ್ಥಾನ ಪರಿಷತ್ ವತಿಯಿಂದ ಇದುವರೆಗೆ 1 ಲಕ್ಷಕ್ಕೂ ಅಧಿಕ ಮಂದಿಗೆ ಯೋಗ ತರಬೇತಿ ನೀಡಲಾಗಿದ್ದು, ಪ್ರತಿ ವರ್ಷ ಯೋಗ ದಿನವನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಜತೆಗೆ ಆಚರಿಸಲಾಗುತ್ತಿತ್ತು. ಈ ವರ್ಷ ಕರೊನಾ ಕಾರಣಕ್ಕೆ ಒಟ್ಟಾಗಿ ಸೇರಲು ಅವಕಾಶ ಇಲ್ಲದಿರುವುದರಿಂದ ಆನ್ಲೈನ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಫೇಸ್ಬುಕ್ನಲ್ಲಿ ನೇರ ಪ್ರಸಾರ: ಯೋಗ ದಿನಾಚರಣೆ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ‘ಮನೆಮನೆಗೆ ಯೋಗ-ಕುಟುಂಬ ಸದಸ್ಯರೊಂದಿಗೆ ಯೋಗ’ ಎಂಬ ಅಭಿಯಾನ ಕೈಗೊಂಡಿದೆ. ಈ ಅಭಿಯಾನದ ಅಂಗವಾಗಿ ಕರೊನಾ ಸಂದರ್ಭದ ಲಾಕ್ಡೌನ್ ಹಾಗೂ ತದನಂತರದ ಒಂದು ವಾರ ಅಂದಾಜು 40ಕ್ಕೂ ಅಧಿಕ ದಿನ ಆನ್ಲೈನ್ ಮೂಲಕ ಯೋಗ ತರಬೇತಿ ನೀಡಲಾಗಿದೆ. ರಾಜ್ಯದೆಲ್ಲೆಡೆಯ ಸುಮಾರು 1.5 ಲಕ್ಷ ಮಂದಿ ಫೇಸ್ ಬುಕ್ ಮೂಲಕ ನೇರಪ್ರಸಾರ ಆಗಲಿರá-ವ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ನ ಫೇಸ್ಬುಕ್ ಪೇಜ್ನಲ್ಲಿ (www. facebook.com/rashtrotthanaparishath) ಭಾನುವಾರ ಬೆಳಗ್ಗೆ 6.30ರಿಂದ 7.30ರ ವರೆಗೆ ನೇರಪ್ರಸಾರ ಆಗಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ ಉಪಸ್ಥಿತರಿರಲಿದ್ದಾರೆ.