ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಗುರುವಾರ (ಡಿ.3) ಕನ್ಯಾಕುಮಾರಿಯಲ್ಲಿ ‘ಬುರೇವಿ’ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಡಿ.3ರಿಂದ ಡಿ.6ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದ ದಾವಣಗೆರೆ, ಶಿವಮೊಗ್ಗ, ಹಾಸನ, ಬೀದರ್, ವಿಜಯಪುರ, ಬೆಳಗಾವಿ, ಗದಗ ಹಾಗೂ ಧಾರವಾಡ ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬುಧವಾರ ಕನಿಷ್ಠ ತಾಪಮಾನದಲ್ಲಿ ಸರಾಸರಿ 4-6 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ.