ನ್ಯೂಸ್

ಪ್ರವಾಸೋದ್ಯಮಕ್ಕೆ ಒತ್ತು ಸಿಕ್ಕಿದೆ

ಅವಿನಾಶ್ ಜೈನಹಳ್ಳಿ

ಈ ಬಾರಿ ದಸರೆಯಲ್ಲಿ ಹೆಚ್ಚಿನ ಪ್ರವಾಸಿಗರು ಭಾಗವಹಿಸಿದ್ದರು ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷ ನಾರಾಯಣಗೌಡ ತಿಳಿಸಿದರು.

ಆದರೆ ನಿರೀಕ್ಷಿತ ಪ್ರಮಾಣದಲ್ಲಿ ವಿದೇಶಿಯರು ಹಾಗೂ ಬೇರೆ ರಾಜ್ಯದ ಪ್ರವಾಸಿಗರು ಬರಲಿಲ್ಲ. ಆದರೆ ನಮ್ಮ ರಾಜ್ಯದ ಪ್ರವಾಸಿಗರು ನಿರೀಕ್ಷಿತ ಪ್ರಮಾಣಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಈ ಬಾರಿ ದಸರೆಯಲ್ಲಿ ಜಿಲ್ಲಾಡಳಿತ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಕೆಲಸವನ್ನು ಮಾಡಿದೆ. ಇದರಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುಕೂಲವಾಗಿದೆ.