ನವದೆಹಲಿ: ದೆಹಲಿಯ ಆಗ್ರಾದಲ್ಲಿ ಪ್ರವಾಸಿಗನೊಬ್ಬ ಕಾರನ್ನು ಚಾಲನೆ ಮಾಡುವಾಗ ಆಕಸ್ಮಿಕವಾಗಿ ಎದುರಿನ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಕಾರಣವನ್ನು ಮುಂದಿಟ್ಟುಕೊಂಡ ಗುಂಪೊಂದು ಚಾಲಕನಿಗೆ ದೊಣ್ಣೆ, ಕಬ್ಬಿಣದ ರಾಡ್ನಿಂದ ಮನಬಂದಂತೆ ಥಳಿಸಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ: ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ; ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಎಸ್.ಕಮಲಕುಮಾರ ಹೇಳಿಕೆ
ಯುವಕರ ಗುಂಪೊಂದು ದೆಹಲಿಯ ಪ್ರವಾಸಿಗರೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಈ ಘಟನೆಯ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಸಂತ್ರಸ್ತ ಪೊಲೀಸರಿಗೆ ದೂರು ನೀಡಿಲ್ಲ. ಆದ್ರೆ, ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ನೋಡಿದ ಬಳಿಕ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ಗಮನ ಹರಿಸಿದೆ.
ವೈರಲ್ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ಆರಿಬ್ ಅಹ್ಮದ್, "ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಮತ್ತು ಅಪರಾಧಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾನೂನು ಪ್ರಕಾರ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು,(ಏಜೆನ್ಸೀಸ್).