ನ್ಯೂಸ್

ಶ್ರೀನಗರದಲ್ಲಿ ಎನ್​​ಕೌಂಟರ್, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಇಲ್ಲಿಯ ಹೊರವಲಯದಲ್ಲಿರುವ ರಣಬೀರ್‌ಗಢ ಪಂಜಿನಾರಾದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​​​ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ ಕುರಿತು ಐಜಿ ಪೊಲೀಸ್ ವಿಜಯ್ ಕುಮಾರ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 


ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದವು. ಪೋಲಿಸ್, ಸಿಆರ್‌ಪಿಎಫ್ ಮತ್ತು ಸೇನೆಯ ತಂಡ ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದರಿಂದ, ಅಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದು, ಅದು ಎನ್‌ಕೌಂಟರ್‌ ನಡೆಯಲು ಕಾರಣವಾಯಿತು. ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.