ಗದಗ: ಲಕ್ಷ್ಮೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಗುರುವಾರ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದು, 7 ಜನರು ಗಾಯಗೊಂಡಿದ್ದಾರೆ.
ಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ವಾಪಸ್ ಮನಗೆ ಬರುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(40) ಮತ್ತು ಸೋಮವ್ವಾ ಅಡುಗೆಮನಿ(48) ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದಲ್ಲಿ ಗಾಯಾಗೊಂಡವರನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದು, ಬಡ ಜೀವಗಳು ಉಳಿಯಲೆಂದು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.