ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ದೂರಿದರು.
ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕಾರ ವೇಳೆ ಈ ದೂರು ಕೇಳಿ ಸಿಟ್ಟಾದ ಸಿಎಂ, ಸ್ಥಳದಿಂದಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂದು ಸೂಚಿಸಿದರು.
ಹಾಸನ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ, ಪಹಣಿ ಮಾಡಿಕೊಡುವ ವಿಚಾರದಲ್ಲಿ ತರಾಟೆಗೆ ತೆಗೆದುಕೊಂಡರು. ಯಾಕಪ್ಪ ಇಷ್ಟೊಂದು ತಡ ಮಾಡುತ್ತೀರಿ, ಇಂತದಕ್ಕೆಲ್ಲ ವಿಳಂಬ ಮಾಡಬೇಡಿ.
ನಮ್ಮ ಮೂವರು ಕಾರ್ಯಕರ್ತರು ಬರುತ್ತಾರೆ. ಕೂಡಲೇ ಕೆಲಸ ಮಾಡಿಕೊಡಿ ಎಂದು ಸೂಚಿಸಿದರು.