ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ಆದೇಶ ಪ್ರಕಟಿಸಿದೆ.
ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಪ್ರಕರಣದಲ್ಲಿ ಬಂಧನವಾಗಿದ್ದ ೨೦ ಮಂದಿ ಆರೋಪಿಗಳು ಕೂಡ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ. ಬುಧವಾರ ಕಲಬುರಗಿ ಸೇರಿ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಸ್ಥಳಾಂತರ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.
ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಪುರ ಮಹೇಶ್‌ನನ್ನು ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೂಡಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಇಪ್ಪತ್ತು ಜನರನ್ನು ಬಂಧನ ಮಾಡಲಾಗಿತ್ತು.