ನ್ಯೂಸ್

ಚಾರಣಿಗರ ಸಾವು, ರಾಜ್ಯಪಾಲರ ಸಂತಾಪ

ಬೆಂಗಳೂರು: ಉತ್ತರಾಖಂಡ್‌ನ ಸಹಸ್ತ್ರತಲ್‌ನಲ್ಲಿ ಚಾರಣಕ್ಕೆ ತೆರಳಿದ್ದ ಕೆಲವು ಕನ್ನಡಿಗರು ಮೃತ ಹೊಂದಿದ ಹಿನ್ನಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಉತ್ತರಾಖಂಡದ ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಅಪಾಯಕ್ಕೆ ಸಿಲುಕಿ, ಕರ್ನಾಟಕದ ಕೆಲವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.