ಬೆಂಗಳೂರು: ಸಮಾರಂಭವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ರೀರಂಗಪಟ್ಟಣ ಜೆಎಂಎ್ಸಿ ಕೋರ್ಟ್ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.