ನ್ಯೂಸ್

ಮದುವೆಯಾಗು ಎಂದಿದ್ದೆ ಈಕೆಯ ಪಾಲಿಗೆ ಮುಳುವಾಯ್ತು; 31 ತುಂಡುಗಳಾಗಿ ಕತ್ತರಿಸಿದ 5 ಮಕ್ಕಳ ತಂದೆ

ಉಮರ್‌ಕೋಟೆ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಲ್ಕರ್​ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಈ ಬಾರು ಓಡಿಶಾದ ನಬರಂಗ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ಯುವತಿಯನ್ನು ಆರೋಪಿಗಳನ್ನು ಕೊಲೆ ಮಾಡಿ ಬಳಿಕ ಆಕೆಯ ದೇಹವನ್ನು 31 ತುಂಡುಗಳನ್ನಾಗಿ ಕತ್ತರಿಸಿ ಮಾಡಿನಲ್ಲಿ ಬಿಸಾಕಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿಗೆ ಈಗಾಗಲೇ ಮದುವೆಯಾಗಿ ಐವರು ಮಕ್ಕಳಿದ್ದು, ಬುಡಕಟ್ಟು ಸಮುದಾಯದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದ. ಆಕೆ ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂಬ ಕಾರಣಕ್ಕೆ ಆತ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಬಳಿಕ ನಡೆದ ಘಟನೆ ಬಗ್ಗೆ ತನ್ನ ಹಂಡತಿ ಬಳಿ ಹೇಳಿಕೊಂಡಿದ್ದು, ಆಕೆಯ ಸಹಾಯದೊಂದಿಗೆ ಯುವತಿಯ ದೇಹವನ್ನು 31 ತುಂಡುಗಳನ್ನಾಗಿ ಕತ್ತರಿಸಿ ಬಳಿಕ ಅದನ್ನು ಮುರುಂದಿಹಿ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದಾರೆ. ಯುವತಿ ಕಾಣೆಯಾಗಿರುವ ಬಗ್ಗೆ ಆಕೆಯ ತಂದೆ ದೂರು ನೀಡಿದ್ದರು. ಅದೇ ಸಮಯಕ್ಕೆ ನಮಗೆ ಕಾಡಿನಲ್ಲಿ ವ್ಯಕ್ತಿಯೊಬ್ಬರ ದೇಹದ ಭಾಗಗಳು ಸಿಕ್ಕಿರುವುದಾಗಿ ಮಾಹಿತಿ ಲಭಿಸಿತ್ತು.

ಪ್ರಕರಣ ದಾಖಲಿಸಿಕೊಂಡು ಕೂಲಂಕುಷವಾಗಿ ತನಿಖೆ ನಡೆಸಿದಾಗ ಕೊಲೆ ಮಾಡಿ ಎಸೆದಿರುವುದು ಬೆಳಕಿಗೆ ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.