ನ್ಯೂಸ್

ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೈಕ್​ಗೆ ಡಿಕ್ಕಿ ಹೊಡೆದ ಲಾರಿ ಪಲ್ಟಿ!

ಹೈದ್ರಾಬಾದ್​: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಮತ್ತು ಬೈಕ್​ಗೆ ಡಿಕ್ಕಿ ಹೊಡೆದಿರುವ ಭೀಕರ ದೃಶ್ಯ ಇದೀಗ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅದಿಲಾಬಾದ್ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ವಾಘ್‌ಪುರ ಕ್ರಾಸ್‌ರೋಡ್ ಬಳಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ರಾಜಸ್ಥಾನದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಹಿನ್ನಲೆ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಲಾಗಿದೆ,(ಏಜೆನ್ಸೀಸ್).