Mumbai-Pune Expressway: ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಶನಿವಾರ (ಜುಲೈ 26) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ, ಓರ್ವ ಮಹಿಳೆ ಸಾವನಪ್ಪಿದ್ದು, ಉಳಿದ 19 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಎಕ್ಸ್‌ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಇಳಿಜಾರಿನಲ್ಲಿ ಇಳಿಯುವಾಗ ಟ್ರಕ್ನ ಬ್ರೇಕ್ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಮುಂದೆ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು 20 ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಅಪಘಾತದಲ್ಲಿ 19 ಜನರಿಗೆ ಗಾಯವಾಗಿದ್ದು, ಅವರನ್ನೆಲ್ಲಾ ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟ್ರಕ್ ಚಾಲಕನನ್ನು ಈಗಾಗಲೇ ಪೊಲೀಸ್ರು ಬಂಧಿಸಿದ್ದು, ವಾಹನ ಚಾಲನೆ ಮಾಡುವ ಸಮಯದಲ್ಲಿ ಅವನು ಮದ್ಯ ಸೇವಿಸಿರಲಿಲ್ಲ ಎನ್ನುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್)