Ministry of External Affairs: ಯುಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವ ಮಾರ್ಗಗಳನ್ನು ಕಂಡುಕೊಳ್ಳಲು ಮುಂದಿನ ವಾರ ಅಲಾಸ್ಕಾದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಮಾತುಕತೆಯನ್ನು ಭಾರತ ಸ್ವಾಗತಿಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಸಚಿವಾಲಯವು, ಆಗಸ್ಟ್ 15 ರಂದು ಅಲಾಸ್ಕಾದಲ್ಲಿ ಯುಎಸ್ ಮತ್ತು ರಷ್ಯಾ ಮಧ್ಯೆ ನಡೆಯಲಿರುವ ಮಾತುಕತೆಯನ್ನು ಭಾರತ ಸ್ವಾಗತಿಸುತ್ತದೆ. ಈ ಸಭೆಯು ಯುಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸುವ ಮತ್ತು ಶಾಂತಿಯ ನಿರೀಕ್ಷೆಗಳನ್ನು ತೆರೆಯುವ ಭರವಸೆಯನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ, ಇದು ಯುದ್ಧದ ಯುಗವಲ್ಲ. ಆದ್ದರಿಂದ, ಭಾರತವು ಮುಂಬರುವ ಶೃಂಗಸಭೆಯ ಸಭೆಯನ್ನು ಅನುಮೋದಿಸುತ್ತದೆ ಮತ್ತು ಈ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ ಎಂದು ಬರೆದುಕೊಂಡಿದೆ.
ಇದನ್ನೂ ಓದಿ: ರಜಿನಿಕಾಂತ್ ‘ಕೂಲಿ’ ಈ ಕಂಪನಿ ಉದ್ಯೋಗಿಗಳಿಗೆ ಫುಲ್ ‘ಜಾಲಿ’! ಚಿತ್ರ ರಿಲೀಸ್ ದಿನವೇ ರಜೆ ಘೋಷಣೆ | Coolie Release
ಉಕ್ರೇನ್ ಸಂಘರ್ಷದ ಕುರಿತು ಮುಂದಿನ ಶುಕ್ರವಾರ ಅಲಾಸ್ಕಾದಲ್ಲಿ ಟ್ರಂಪ್ ಮತ್ತು ಪುಟಿನ್ ಭೇಟಿಯಾಗಲಿದ್ದಾರೆ ಎಂದು ಅಮೆರಿಕ ಮತ್ತು ರಷ್ಯಾ ಘೋಷಿಸಿದ ಕೆಲವೇ ಗಂಟೆಗಳ ನಂತರ ಭಾರತದ ಪ್ರತಿಕ್ರಿಯೆ ಬಂದಿದೆ.
ಆಗಸ್ಟ್ 15 ರಂದು ಅಲಾಸ್ಕಾದಲ್ಲಿ ನಡೆಯಲಿರುವ ಸಭೆಗಾಗಿ ಅಮೆರಿಕ ಮತ್ತು ರಷ್ಯಾದ ನಡುವೆ ನಡೆಯಲಿರುವ ಮಾತುಕತೆಯನ್ನು ಭಾರತ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.