ನ್ಯೂಸ್

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಸಾವು

ತುಮಕೂರು: ನಗರದ ಜಿಲ್ಲಾ ಪೊಲೀಸ್ ಕಚೇರಿಯ ವೈರ್‌ಲೆಸ್ ಕಂಟ್ರೋಲ್ ರೂಂ.ನಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಎನ್.ಉಮೇಶ್(50) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಮೃತರಾದರು.


ನಗರದ ಶಿರಾ ಗೇಟ್ ನಿವಾಸಿಯಾಗಿರುವ ಉಮೇಶ್ 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.