ನ್ಯೂಸ್

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ

ತುಮಕೂರು: ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದ್ದು ವರದಿ ಬಂದಮೇಲೆ ಸತ್ಯ ಬಯಲಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದರು.

ಸಚಿವರು ಭಾಗಿಯಾಗಿದ್ದಾರೆ ಎಂದು ಯಾರುಯಾರು ಹೇಳಿಕೆ ನೀಡಿದ್ದಾರೊ ಅವೆಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಯಲಿದೆ, ಆಮೇಲೆ ಸತ್ಯಾಂಶ ಗೊತ್ತಾಗಲಿದೆ, ಸುಮ್ಮನೆ ಹೇಳಿಕೆ ನೀಡಿ ಸುಮ್ಮನಾಗಲು ಸಾಧ್ಯವಿಲ್ಲ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದರು.