ನ್ಯೂಸ್

ಪಾರ್ಕ್‌ನಲ್ಲಿ ಕುಳಿತಿದ್ದಾಗ ಪರಸ್ಪರ ಇರಿದುಕೊಂಡು ಇಬ್ಬರು ಸ್ನೇಹಿತರು ಸಾವು; ಕಾರಣ ಹೀಗಿದೆ..! Friends

Friends: ದೀರ್ಘಕಾಲದಿಂದ ಸ್ನೇಹಿತರಾಗಿದ್ದ ಇಬ್ಬರು ವ್ಯಕ್ತಿಗಳು ಪರಸ್ಪರ ಇರಿದು ಸಾವನ್ನಪ್ಪಿದ ಘಟನೆ ಪಶ್ಚಿಮ ದೆಹಲಿಯ ಖಯಾಲಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ (ಜು.14) ತಿಳಿಸಿದ್ದಾರೆ.

ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಖ್ಯಾಲಾದ ಬಿ ಬ್ಲಾಕ್ ನಿವಾಸಿಗಳಾದ ಇಬ್ಬರೂ ಸ್ಥಳೀಯ ಉದ್ಯಾನವನದಲ್ಲಿ ಕುಳಿತಿದ್ದಾಗ ಜಗಳ ನಡೆದಿದೆ. ಜಗಳವು ಬೇಗನೇ ದೈಹಿಕ ಜಗಳಕ್ಕೆ ತಿರುಗಿ, ಪರಸ್ಪರ ಇರಿದ ಘಟನೆ ನಡೆದಿದೆ.

ಸಮೀಪದ ಜನರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಆಸ್ಪತ್ರೆಯವರು ಪೊಲೀಸರಿಗೆ ಇಬ್ಬರು ಪುರುಷರು ಇರಿತದ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೃತಪಟ್ಟ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪರಿಚಿತರಾಗಿರುವ ಸ್ನೇಹಿತರು ಎಂದು ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. (ಏಜೆನ್ಸೀಸ್​)