ನ್ಯೂಸ್

Bus Accident: ಎರಡು ಭೀಕರ ಆಕ್ಸಿಡೆಂಟ್​: 52 ಮಂದಿ ಸಾವು..65 ಜನರ ಸ್ಥಿತಿ ಗಂಭೀರ

ಅಫ್ಘಾನಿಸ್ತಾನ: (Bus Accident) ಎರಡು ಗಂಭೀರ ರಸ್ತೆ ಅಪಘಾತಗಳು ಸಂಭವಿಸಿವೆ. ಕಾಬೂಲ್-ಕಂದಹಾರ್ ಹೆದ್ದಾರಿಯಲ್ಲಿ ಸಂಭವಿಸಿದ ಎರಡು ಪ್ರಮುಖ ರಸ್ತೆ ಅಪಘಾತಗಳಲ್ಲಿ 52 ಜನರು ಸಾವನ್ನಪ್ಪಿದ್ದಾರೆ ಮತ್ತು 65 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಜ್ನಿ ಪ್ರಾಂತ್ಯದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ.

ಅಧಿಕಾರಿಗಳ ಪ್ರಕಾರ, ಘಜ್ನಿ ಪ್ರಾಂತ್ಯದ ಶಹಬಾಜ್ ಗ್ರಾಮದ ಬಳಿ ಮೊದಲ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂಧನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಬಸ್ ಹಾಗೂ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ 20 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಹಲವರು ಸಾವನ್ನಪ್ಪಿದ್ದಾರೆ.

ಮತ್ತೊಂದೆಡೆ, ಅಂದರ್ ಜಿಲ್ಲೆಯಲ್ಲಿ ಮತ್ತೊಂದು ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.. ಕೆಲವರ ಸ್ಥಿತಿ ಗಂಭೀರವಾಗಿದೆ. ಆದರೆ, ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಹಲವರನ್ನು ರಕ್ಷಿಸಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಎರಡು ಪ್ರಮುಖ ರಸ್ತೆ ಅಪಘಾತಗಳಲ್ಲಿ 52 ಜನರು ಸಾವನ್ನಪ್ಪಿದ್ದಾರೆ ಮತ್ತು 65 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಪೊಲೀಸ್​​ ಅಧಿಕಾರಿಗಳಿಂದ ತಿಳಿದು ಬರಬೇಕಿದೆ....