ವಾಷಿಂಗ್ಟನ್: ಅಮೆರಿಕಾದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಟೆಕ್ಸಾಸ್‌ನಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಶೂಟೌಟ್‌ಗೆ ಕಾರಣವಾಯಿತು. ಈ ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಗಂಗಾನದಿಯಲ್ಲಿ ಮಗುಚಿದ ದೋಣಿ..6 ಮಂದಿ ನಾಪತ್ತೆ
ರೌಂಡ್ ರಾಕ್‌ನಲ್ಲಿರುವ ಉದ್ಯಾನವನದಲ್ಲಿ ಶನಿವಾರ ರಾತ್ರಿ ಮನರಂಜನೆ ಕಾರ್ಯಕ್ರಮ ಏರ್ಪಡಿಸಿದ್ದು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಆಗ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿತು. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಮಕ್ಕಳಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆರೋಪಿಗಳು ಆ ವೇಳೆಗಾಗಲೇ ಪರಾರಿಯಾಗಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.