ನ್ಯೂಸ್

ಇಬ್ಬರು ಪೆಡ್ಲರ್‌ಗಳ ಸೆರೆ;ತಾವರೆಕೆರೆ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕು ಚಿಂತಾಮಣಿ ಮೂಲದ ಬಿ.ಎಂ. ಕಲ್ಯಾಣಕುಮಾರ್ (25) ಮತ್ತು ಮುಳಬಾಗಿಲು ತಾಲ್ಲೂಕು ಸಂಗೊಂಡನಹಳ್ಳಿಯ ಎಸ್.ಆರ್. ಕೃಷ್ಣಪ್ಪ (25) ಬಂಧಿತರು. ಆರೋಪಿಗಳಿಂದ 40 ಸಾವಿರ ರೂ. ಮೌಲ್ಯದ 900 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಈ ಇಬ್ಬರು ಆರೋಪಿಗಳು, ಸುಲಭವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ರಾಮನಗರ ಜಿಲ್ಲಾ ಎಸ್‌ಪಿ ಕಾರ್ತಿಕ್ ರೆಡ್ಡಿ, ಮಾಗಡಿ ಉಪವಿಭಾಗ ಡಿವೈಎಸ್‌ಪಿ ಎಂ.ಪ್ರವೀಣ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ರಾಮಪ್ಪ ಬಿ. ಗುತ್ತೇರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿ ಮಾದಕ ದ್ರವ್ಯ ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.