ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಇಂದು (ಆಗಸ್ಟ್ 10) ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಅಹ್ಲಾನ್ ಗಡೋಲ್‌ನ ಕೋಕರ್ನಾಗ್ ಉಪವಿಭಾಗದ ಅರಣ್ಯದಲ್ಲಿ ಆ್ಯಂಟಿ ಟೆರರಿಸ್ಟ್ ಆಪರೇಷನ್ ನಡೆಸುವಾಗಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸೇನೆಯ ವಿಶೇಷ ಪಡೆಗಳು , ಪ್ಯಾರಾಟ್ರೂಪರ್‌ಗಳು ಈ ಕಾರ್ಯಾಚರಣೆಯ ಭಾಗವಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮರ್ಯಾದ ಹತ್ಯೆ ಅಪರಾಧವಲ್ಲ, ಪಾಲಕರು ತಮ್ಮ ಮಕ್ಕಳ ಮೇಲಿಟ್ಟಿರುವ ಪ್ರೀತಿಗೆ ಸಾಕ್ಷಿ; ಖ್ಯಾತ ನಟನ ಹೇಳಿಕೆ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಕಾರ್ಯಾಚರಣೆ ನಡೆಸುತ್ತಿದ್ದ ಸೇನೆ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿ, ನಾಗರೀಕರು ಸೇರಿದಂತೆ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಬ್ಬರು ಯೋಧರು ಹುತಾತ್ಮರಾದರು.
ಕಾರ್ಯಾಚರಣೆ ಮುಂದುವರೆದಿದ್ದು, ಗಡೋಲ್‌ನ ಕೋಕರ್ನಾಗ್ ಪ್ರದೇಶದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.