ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಕುಣಿಗಲ್ನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಸರನ್ನ ಸೇವಿಸಿದ್ದಾರೆ. ರಾತ್ರಿ ಮಕ್ಕಳು ಮನೆಗೆ ಹೋದಾಗ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ರಾತ್ರೋರಾತ್ರಿ ಅಸ್ವಸ್ಥ ಮಕ್ಕಳನ್ನು ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
10 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಕುಣಿಗಲ್ ಟಿಹೆಚ್ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಗರದ ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ್ ಕಾಲೇಜ್ ಹಾಸ್ಟೆಲ್ನಲ್ಲಿ ರಾತ್ರಿ ಆಹಾರ ಸೇವಿಸಿದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.