ಬೆಂಗಳೂರು: ಯುಜಿನೀಟ್-24 ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಮೇತ ಸಂಬಂಧಪಟ್ಟ ಕಾಲೇಜುಗಳಿಗೇ ಹೋಗಿ ವರದಿ ಮಾಡಿಕೊಳ್ಳಬೇಕು. ಅಂತಹವರು ದಾಖಲೆ ಸಲ್ಲಿಸಲು ಅ.21ರಂದು ಕೆಇಎ ಕಚೇರಿಗೆ ಬರುವ ಅಗತ್ಯ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಇಲ್ಲಿಯವರೆಗೂ ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎಗೆ ಬರಬೇಕಿತ್ತು. ಈಗ ಶುಲ್ಕ ಪಾವತಿ ಮಾಡುವುದಕ್ಕೆ ಮತ್ತು ಕಾಲೇಜಿಗೆ ದಾಖಲೆ ಸಲ್ಲಿಸಿ ವರದಿ ಮಾಡಿಕೊಳ್ಳಲು ಅ.22ರವರೆಗೂ ಅವಕಾಶವಿದೆ ಎಂದು ತಿಳಿಸಿದ್ದಾರೆ.