ನ್ಯೂಸ್

UIICL Recruitment 2023; ವಿಮಾ ವಲಯದಲ್ಲಿ AO ಹುದ್ದೆಗಳು, ಇಂದಿನಿಂದ ಅರ್ಜಿ ಸಲ್ಲಿಕೆ ಶುರು

ಬೆಂಗಳೂರು: ವಿಮಾ ವಲಯದಲ್ಲಿ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್​​​. ಸಾರ್ವಜನಿಕ ವಲಯದ ವಿಮಾ ಕಂಪನಿ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (UIICL) ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಆಡಳಿತ ಅಧಿಕಾರಿ (AO) ಸ್ಕೇಲ್ 1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಇಂದು ಸಂಸ್ಥೆಯು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಒಟ್ಟು 100 ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ರೆಗ್ಯುಲರ್ ಬೇಸಿಸ್​​​​ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್ uiic.co.in ನಲ್ಲಿ ಒದಗಿಸಲಾದ ಆನ್‌ಲೈನ್ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕು. ನಂತರ ನೋಂದಾಯಿತ ವಿವರಗಳೊಂದಿಗೆ ಲಾಗ್ ಇನ್ ಆಗಬೇಕು. ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 1000 ರೂ.(ಜಿಎಸ್‌ಟಿ ಹೆಚ್ಚುವರಿ) ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಕೇವಲ 250 ರೂ. ಶುಲ್ಕವಿರುತ್ತದೆ. ಅರ್ಜಿ ಪ್ರಕ್ರಿಯೆಯು ಇಂದಿನಿಂದ ಅಂದರೆ ಆಗಸ್ಟ್ 24 ರಿಂದ ಪ್ರಾರಂಭವಾಗಿದೆ. ಸೆಪ್ಟೆಂಬರ್ 14ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಹತಾ ಮಾನದಂಡ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ UG/PG ಪದವಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅಭ್ಯರ್ಥಿಗಳ ವಯಸ್ಸು 31 ಮಾರ್ಚ್ 2023 ರಂತೆ 21 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಇತರ ವಿವರಗಳಿಗಾಗಿ ನೇಮಕಾತಿ ಅಧಿಸೂಚನೆಯನ್ನು ನೋಡಿ.