StartFragment Rajnath Singh: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಯಾವುದೇ ಶಕ್ತಿಯು ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಬುಧವಾರ (ಸೆ. 17) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ತೆಲಂಗಾಣದ ಹೈದರಾಬಾದ್ನಲ್ಲಿ ಹೈದರಾಬಾದ್ ವಿಮೋಚನಾ ದಿನದ 78 ನೇ ವಾರ್ಷಿಕೋತ್ಸವನ್ನು ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಸಾಹಸವನ್ನು ಶ್ಲಾಘಿಸಿದರು. ಇದೇ ವೇಳೆ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಮಸೂದ್ ಅಜರ್ ಅವರ ಕುಟುಂಬವನ್ನು ನಾಶಪಡಿಸಲಾಗಿದೆ. ಇಂದು ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಕಮಾಂಡರ್ ಒಬ್ಬರು ಇದನ್ನು ಒಪ್ಪಿಕೊಂಡಿದ್ದಾರೆ. ನಮ್ಮ ಭಾರತೀಯ ಸೈನಿಕರ ಶೌರ್ಯ ಮತ್ತು ಧೈರ್ಯ ಇದಕ್ಕೆ ಸಾಕ್ಷಿ. ನಮ್ಮ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತದ ಬಹಳಷ್ಟು ಬೆಳೆದಿದೆ. ಆದ್ದರಿಂದ, ಯಾವುದೇ ಶಕ್ತಿಯು ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಧೈರ್ಯ ಮಾಡಲು ಸಾಧ್ಯವಿಲ್ಲ" ಎಂದು ಹೇಳಿದರು. ಇದನ್ನೂ ಓದಿ: ಭಾರತದ ಈ ಬೌಲರ್ನ ಬೌಲಿಂಗ್ ಶೈಲಿಯನ್ನು ಪಾಕ್ ಬ್ಯಾಟರ್ಗಳು ಅರ್ಥಮಾಡಿಕೊಳ್ಳಲಿಲ್ಲ: ತೀವ್ರ ವಾಗ್ದಾಳಿ ನಡೆಸಿದ ವಾಸಿಮ್ ಅಕ್ರಮ್| Wasim Akram
ಹೈದದಾಬಾದ್ ಪ್ರಾಂತ್ಯವನ್ನು ಸಹ ಆಪರೇಷನ್ ಪೋಲೋ ಮೂಲಕ ಹೈದರಾಬಾದ್ ನಿಜಾಮನ ಆಳ್ವಿಕೆಯಿಂದ ನಗರವನ್ನು ಮುಕ್ತಗೊಳಿಸಿ ನಂತರ ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಳಿಸಲಾಯಿತು. ಹಾಗೆಯೇ ಯಾರೋ ಮೂರನೇ ವ್ಯಕ್ತಿಯ ಮಾತು ಕೇಳಿ ಭಾರತ ಮತ್ತು ಪಾಕಿಸ್ತಾನ ನಡುವೆ ಶಾಂತಿ ಒಪ್ಪಂದ ಮಾಡಿಕೊಳ್ಳಲಿಲ್ಲ. ಆಪರೇಷನ್ ಸಿಂಧೂರ್ ಪುನರಾರಂಭಗೊಳ್ಳುತ್ತದೆ ಎಂದು ತಿಳಿಸಿದರು.
ಇತ್ತೀಚೆಗೆ ಅಲ್ ಜಜೀರಾ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ-ಪಾಕಿಸ್ತಾನ ನಡುವಿನ ಶಾಂತಿ ಒಪ್ಪಂದಕ್ಕೆ ಯಾವುದೇ ಮೂರನೇ ವ್ಯಕ್ತಿ ಮಧ್ಯೆಸ್ಥಿಕೆ ವಹಿಸಿಲ್ಲಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿದ್ದರು. (ಏಜೆನ್ಸೀಸ್)