ನವದೆಹಲಿ: ಕೃಷಿ ಮಾರುಕಟ್ಟೆಗಳ ಉದಾರೀಕರಣಗೊಳಿಸಬೇಕಾದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಕೃಷಿಕರು ಕೈ ಜೋಡಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಂಸತ್ತಿನಲ್ಲಿ ಶನಿವಾರ ಬಜೆಟ್ ಮಂಡಿಸಿದ ಅವರು, ಕೃಷಿ ಉತ್ತೇಜನ ಮತ್ತು ಕೃಷಿಕರ ಕಲ್ಯಾಣಕ್ಕೆ ಸಂಬಂಧಿಸಿದ 16 ಅಂಶಗಳ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ ಎಂದರು.
ಕೃಷಿ ಸೇವಾ ಕ್ಷೇತ್ರದಲ್ಲಿ ಸಾಕಷ್ಟು ಹೂಡಿಕೆಯ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಸರ್ಕಾರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮೂಲಕ 6.11 ಕೋಟಿ ಕೃಷಿಕರನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಿದೆ ಎಂದರು.
ನಾವು ಮಾಡುವ ಪ್ರತಿಯೊಂದು ಕೆಲಸವೂ ಮತ್ತು ಮುಂಗಡ ಪತ್ರದ ಮೂಲಕ ನಾವು ಏನು ಘೋಷಿಸುತ್ತೇವೆಯೋ ಅವೆಲ್ಲವನ್ನೂ ಸರ್ಕಾರ ದೇಶಕ್ಕೋಸ್ಕರವೇ ಮಾಡುತ್ತಿರುವುದು ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು. (ಏಜೆನ್ಸೀಸ್)